ಕರ್ನಾಟಕ ರಾಜ್ಯಾದ್ಯಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಇತ್ತೀಚಿಗೆ ನೇಮಕಾತಿ ಮಾಡಿಕೊಳ್ಳಲು ಆರಂಭಿಸಿದ್ದು 10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸ್ ಆದವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.
ಕರ್ನಾಟಕ ರಾಜ್ಯದ ಒಟ್ಟು ಮೂರು ಜಿಲ್ಲೆಗಳಲ್ಲಿ 1,112 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಈ ಕೇಳಗಿನಂತಿದೆ.• ಹಾಸನ ಜಿಲ್ಲೆಯಲ್ಲಿ – 734 ಹುದ್ದೆಗಳು
• ಬಳ್ಳಾರಿ ಜಿಲ್ಲೆಯಲ್ಲಿ – 141 ಹುದ್ದೆಗಳು
• ದಾವಣಗೆರೆ ಜಿಲ್ಲೆಯಲ್ಲಿ – 237 ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂಥವರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12ನೇ ತರಗತಿ ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ವ್ಯಾಸಂಗ ಪೂರ್ಣಗೊಳಿಸಿರಬೇಕು.
ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ, ಅರ್ಜಿ ಸಲ್ಲಿಸುವಂಥವರು 18 ರಿಂದ 35 ವರ್ಷದೊಳಗಿನವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಶುಲ್ಕ : ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ. ಅರ್ಹರಿರುವ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04ನೇ ಸೆಪ್ಟೆಂಬರ್ 2024.
ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10ನೇ ಸೆಪ್ಟೆಂಬರ್ 2024.
ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 09ನೇ ಸೆಪ್ಟೆಂಬರ್ 2024.
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹೇಗೆ ಸಲ್ಲಿಸಬೇಕು?
ಹಾಸನ, ಬಳ್ಳಾರಿ ಹಾಗೂ ದಾವಣಗೆರೆ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ ನೀವು ಯಾವ ಜಿಲ್ಲೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವಿರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನಿಗದಿಪಡಿಸಿದ ಕೊನೆಯ ದಿನಾಂಕದ ಮುಂಚಿತವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.