ಹಾಸನ: ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿ ರೈತನನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಸಿದ್ದರಹಳ್ಳಿ ತಾಂಡ್ಯದಲ್ಲಿ ನಡೆದಿದೆ. ಗ್ರಾಮದ ಮೂರ್ತಿನಾಯ್ಕ (68) ಕರಡಿ ದಾಳಿಯಿಂದ ಗಾಯಗೊಂಡ ರೈತ ಬೆಳಿಗ್ಗೆ ಮನೆಯಿಂದ ಜಮೀನಿಗೆ ತೆರಳುತ್ತಿದ್ದ ರೈತ ಮೂರ್ತಿನಾಯ್ಕ ಮನೆಯಿಂದ ನೂರು ಮೀಟರ್ ದೂರದಲ್ಲಿದ್ದಾಗ ಕರಡಿ ದಾಳಿ ಮಾಡಿದೆ. ಕರಡಿ ದಾಳಿಯಿಂದ ಮೂರ್ತಿನಾಯ್ಕ ಅವರ ತಲೆ, ಮುಖ, ಕೈ, ಕಾಲಿಗೆ ತಿವ್ರ ಸ್ವರೂಪದ ಗಾಯಗಳಾಗಿದೆ.
ಗಾಯಾಳುವಿಗೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅರಸೀಕೆರೆ ತಾಲ್ಲೂಕಿನಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಕಳೆದ ಒಂದು ವಾರದ ಹಿಂದೆ ಕರಡಿ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿದ್ದರು. ಇದೀಗ ರೈತನ ಮತ್ತೆ ಕರಡಿ ದಾಳಿ ಮಾಡಿರುವ ಹಿನ್ನೆಲೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಕರಡಿಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.
Tags
ಅರಸೀಕೆರೆ