ಸಕಲೇಶಪುರ:- ಹೆತ್ತೂರು ಹೋಬಳಿಯ ಕುರಭತ್ತೂರು ಗ್ರಾಮಪಂಚಾಯಿತಿಯ ಹಡ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 25 ಶಾಲಾ ಮಕ್ಕಳಿಗೆ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಕಲೇಶಪುರ ಘಟಕದ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಅರುಣ್ ಗೌಡ ಕರಡಿಗಾಲ ನೋಟ್ ಬುಕ್ ಹಾಗೂ ಪೆನ್ನುಗಳನ್ನು ವಿತರಿಸಿದರು .
![]() |
ಹಡ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ |
ನಂತರ ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯರಾದ ಶಂಕರ್ "ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಇತರ ದಾನಿಗಳು ಮುಂದೆ ಬಂದರೆ ವಿದ್ಯಾರ್ಥಿಗಳ ಓದಿಗೆ ಸಹಕಾರವಾಗುತ್ತದೆ. ಈ ನಿಟ್ಟಿನಲ್ಲಿ ದಾನಿಗಳು ಕೊಟ್ಟ ಕಲಿಕಾ ಸಾಮಗ್ರಿಗಳಿಂದ ವಿದ್ಯಾರ್ಥಿಗಳು ಪ್ರತಿ ದಿನ ಎರಡು ಪ್ರಶ್ನೋತ್ತರಗಳನ್ನು ಕಲಿತು ಬರೆಯುವ ಮೂಲಕ ಅವರಿಗೆ ಕೃತಜ್ಞತೆಯನ್ನು ತಿಳಿಸುವ ಕೆಲಸವನ್ನು ಮಾಡಲಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಹಡ್ಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್ ಮಾತನಾಡುತ್ತಾ ಪತ್ರಕರ್ತರಾದ ಅರುಣ್ ಗೌಡರ ಈ ಸಮಾಜಮುಖಿ ಕೆಲಸಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಪ್ರವೀಣ್ ಕುಮಾರ್, ಅತಿಥಿ ಉಪನ್ಯಾಸಕಿಯಾದ ಪ್ರೀತಿ, ಅಂಗನವಾಡಿ ಕಾರ್ಯಕರ್ತೆಯಾದ ಕಾಮಾಕ್ಷಿ ಇದ್ದರು.