ಹಾಸನ: ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿ.03 ರಂದು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂಬಂಧವಾಗಿ, 2024-25ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸ್ವಯಂ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕವಾಗಿ ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನು ಓದಿ: ಕೃಷಿಯಲ್ಲಿ ಸಾರ್ಥಕತೆ ಕಂಡುಕೊಂಡ ಯಶೋಧಮ್ಮನ ಯಶೋಗಾಥೆ
ವಿಕಲಚೇತನರ ಕ್ಷೇತ್ರದಲ್ಲಿ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆಸಕ್ತಿ ಹೊಂದಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಶಿಕ್ಷಕರು ಮತ್ತು ವೈಯಕ್ತಿಕ ವಿಭಾಗದಡಿ ಅರ್ಜಿ ಸಲ್ಲಿಸುವವರು ದಿನಾಂಕ: 10-10-2024 ರೊಳಗೆ ಅರ್ಜಿಗಳನ್ನು ಪಡೆದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, 9ನೇ ಕ್ರಾಸ್, ಶಂಕರಮಠ ರಸ್ತೆ, ಕೆ.ಆರ್.ಪುರಂ, ಹಾಸನ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ 08172-295546 ನ್ನು ಸಂಪರ್ಕಿಸುವುದು.
Tags
ಹಾಸನ

