ಹಾಸನ: ಆರ್.ಸಿ. ರಸ್ತೆ ಬಳಿ ಇರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಪಕ್ಷದ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೀತಮ್ ಜೆ. ಗೌಡ, “ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿಯನ್ನು ಮೊದಲ ಸದಸ್ಯರಾಗಿ ಸೇರಿಸುವ ಮೂಲಕ ಬಿಜೆಪಿ ಸದಸ್ಯತಾ ಅಭಿಯಾನ ಆರಂಭವಾಯಿತು. ಇಂದಿನಿಂದ ಹಾಸನ ಜಿಲ್ಲೆಯಲ್ಲಿಯೂ ಅಧಿಕೃತವಾಗಿ ಈ ಅಭಿಯಾನವನ್ನು ಆರಂಭಿಸಲಾಗಿದೆ” ಎಂದರು.
ಇದನ್ನು ಓದಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಗೆ ಕರೆ
ಶಾಸಕರಾದ ಸಿಮೆಂಟ್ ಮಂಜು ಮತ್ತು ಹುಲ್ಲಹಳ್ಳಿ ಸುರೇಶ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು, ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರಿದ್ದಾರೆ. ಈ ಅಭಿಯಾನವು ಪಕ್ಷದ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಕಾರ್ಯಕರ್ತರ ನೆಲವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆ” ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸದಸ್ಯತ್ವ ನೋಂದಣಿ ಮಾಡಲಿದ್ದಾರೆ.ಎಂದರು.