ಕಥುವಾದಲ್ಲಿ ಇಬ್ಬರು ಭಯೋತ್ಪಾದಕರು ಎನ್‌ಕೌಂಟರ್: ರೈಸಿಂಗ್ ಸ್ಟಾರ್ ಕಾರ್ಪ್ಸ್‌ ಮುಂದುವರೆಸಿದ ಕಾರ್ಯಾಚರಣೆ

 ಶ್ರೀನಗರ: ಜಮ್ಮು ಸಮೀಪದ ಕಥುವಾದಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸೈನಿಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಪ್ರದೇಶದ ಕಥುವಾ-ಬಸಂತಗಢ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ.

ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಥುವಾದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಈ ವೇಳೆ ತೀವ್ರ ಗುಂಡಿನ ಚಕಮಕಿ ನಡೆಯಿತು ಎಂದು ಜಮ್ಮುವಿನ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.



Post a Comment

Previous Post Next Post