ಹಾಸನ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ಬೆಳಿಗ್ಗೆ 8.30.ರಿಂದ 9.30 ರವರಿಗೆ ಜರುಗುವ ಮಾನವ ಸರಪಳಿ ರಚನೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ಅವರು ಕರೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಅರಕಲಗೂಡು ತಾಲ್ಲೂಕಿನಿಂದ ಪ್ರಾರಂಭಗೊAಡು ಹಾಸನ ತಾಲ್ಲೂಕು ಮಾರ್ಗವಾಗಿ ಬೇಲೂರು ತಾಲ್ಲೂಕು ಮೂಲಕ ಚಿಕ್ಕಮಗಳೂರು ಗಡಿ ಒಟ್ಟು 114 ಕಿ.ಮೀ ಮಾನವ ಸರಪಳಿ ನಿರ್ಮಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು,ಸಂಘ ಸಂಸ್ಥೆಗಳು, ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ತಿಳಿಸಿದರು.ಇದನ್ನು ಓದಿ: ಹಾಸನ ಸಂಸದರ ಹೊಸ ಕಚೇರಿಯ ಉದ್ಘಾಟನೆ - ಕೆ.ಎನ್. ರಾಜಣ್ಣ, ಶ್ರೇಯಸ್ ಪಟೇಲ್ ಉಪಸ್ಥಿತಿ
ಸಂವಿಧಾನ ಪೀಠಿಕೆ ಕುರಿತು ಜನರಲ್ಲಿ ಮನವರಿಕೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿಯೊಬ್ಬ ನಾಗರಿಕರು ಭಾಗವಹಿಸಬೇಕು ಎಂದು ತಿಳಿಸಿದರು.
ಸಂಸದರಾದ ಶ್ರೇಯಸ್ ಎಂ.ಪಟೇಲ್, ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರರು ಉಪಸ್ಥಿತರಿದ್ದರು.
Tags
ಹಾಸನ