ಹಾಸನ: ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಜನರ ಸಮಸ್ಯೆ ಬಗೆಹರಿಸಲು ತಾನು ಮುಂಚೂಣಿಯಲ್ಲಿ ಇರುತ್ತೆನೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ
ತಮ್ಮ ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಇಂದು ಸಚಿವ ಕೆ.ಎನ್ ರಾಜಣ್ಣ ಅವರ ಅಮೃತ ಹಸ್ತ ನಮ್ಮ ಕಚೇರಿ ಉದ್ಘಾಟನೆ ಮಾಡಲಾಗಿದೆ. ಜನರ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವ ನಿಟ್ಟಿನಲ್ಲಿ ನನ್ನ ಅಧಿಕಾರಾವಧಿಯುದ್ದಕ್ಕೂ ಪ್ರಾಮಾಣಿಕ ಪ್ರಯತ್ನ ಮಾಡುವೆ. ವಾರದಲ್ಲಿ ನಿಗದಿತ ಎರಡು ದಿನ ಕಚೇರಿಯಲ್ಲಿ ಇದ್ದು ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಲಾಗುವುದು ಎಂದರು.ಇದನ್ನು ಓದಿ: ಹಾಸನ ಸಂಸದರ ಹೊಸ ಕಚೇರಿಯ ಉದ್ಘಾಟನೆ - ಕೆ.ಎನ್. ರಾಜಣ್ಣ, ಶ್ರೇಯಸ್ ಪಟೇಲ್ ಉಪಸ್ಥಿತಿ
ಜಿಲ್ಲೆಯ ಜನರು ನನಗೆ ಒಂದು ಜವಾಬ್ದಾರಿಯುತ ಸ್ಥಾನ ನೀಡಿದ್ದಾರೆ, ಜಿಲ್ಲೆಯ ಜನರ ಹಾಗೂ ಮುಖಂಡರ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ. ಜತೆಗೆ ನನ್ನ ಕಚೇರಿಗೆ ಸಿಬ್ಬಂದಿ ನೇಮಕ ಮಾಡಿ ಜನರ ಅಹವಾಲುಗಳನ್ನು ಪಡೆದು ಅವರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುವೆ. ಜಿಲ್ಲೆಯ ಅಭಿವೃದ್ಧಿಯೇ ನನ್ನ ಗುರಿ ಎಂದರು.
Tags
ಹಾಸನ