ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಅಗತ್ಯ ಸಿದ್ಧತೆಗೆ ಸೂಚನೆ

ಹಾಸನ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸೆ.15 ರಂದು ಜಿಲ್ಲೆಯಲ್ಲಿ ಮಾನವ ಸರಪಳಿ ರಚಿಸಲು  ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈ ಮಾನವ ಸರಪಳಿ ರಚನೆ ಕಾರ್ಯಕ್ರಮ ಸೆ.15 ರಂದು ಬೆಳಿಗ್ಗೆ 9 ಗಂಟೆಯಿAದ 9.30 ರಾಜ್ಯದ 31 ಜಿಲ್ಲೆಗಳಲ್ಲಿಯೂ ಏಕ ಕಾಲದಲ್ಲಿ  ನಡೆಯಲಿದೆ ಎಂದು ತಿಳಿಸಿದರು.
 ಹಾಸನ ಜಿಲ್ಲೆಯಲ್ಲಿ ಅರಕಲಗೂಡು ತಾಲ್ಲೂಕಿನ ಶಿರಂಗಾಲದಿAದ ಪ್ರಾರಂಭಗೊAಡು ಬೇಲೂರು ತಾಲ್ಲೂಕಿನ ಚಿಕ್ಕಮಂಗಳೂರು ಗಡಿಯವರೆಗೆ  ಮಾನವ ಸರಪಳಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಲು ಸೂಚಿಸಿದರಲ್ಲದೆ, ಮೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು ಮಕ್ಕಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ತಿಳಿಸಿದರು.
ಹಾಸನ ಜಿಲ್ಲೆಯ ಅರಕಲಗೂಡು, ಹಾಸನ ಹಾಗೂ ಬೇಲೂರು ತಾಲ್ಲೂಕು  ವ್ಯಾಪ್ತಿಯಲ್ಲಿ ಮಾನವ ಸರಪಳಿ ಕಾರ್ಯಕ್ರಮ ಜರುಗಲಿದೆ. ನಿಯೋಜಿತ ಸ್ಥಳದಲ್ಲಿ ಅಂದು ಬೆಳಿಗ್ಗೆ 8.30 ಕ್ಕೆ ಹಾಜರಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮಾನವ ಸರಪಳಿ ಕಾರ್ಯಕ್ರಮದ ನಂತರ ಅಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಲಾಗುವುದು.ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸುವಂತೆ  ಸೂಚಿಸಿದರು.
  ಜನಪ್ರತಿನಿಧಿಗಳು, ಎಲ್ಲಾ ಸಮುದಾಯಗಳ ಸಂಘಟನೆಗಳು, ರೆಡ್ ಕ್ರಾಸ್ ಸಂಸ್ಥೆ, ಸ್ವಸಹಾಯ ಸಂಘಗಳು, ಜಿಲ್ಲೆಯ ಎನ್.ಜಿ.ಓ. ಸಂಸ್ಥೆಗಳು, ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರು. ನಗರಸಭಾ ಪೌರ ಕಾರ್ಮಿಕರು, ಸ್ಕೌಟ್ ಆಂಡ್ ಗೈಡ್ಸ್, ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕರು. ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಾನವ ಸರಪಳಿ ರೂಟ್ ನಲ್ಲಿ ಬರುವ ಅಕ್ಕ ಪಕ್ಕದ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳು ಅವರ ಸಮವಸ್ತ್ರದ ಸಮೇತ ಹಾಜರಾಗುವಂತೆ ಕ್ರಮಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಎಲ್ಲಾ ಗ್ರಾಮ ಪಂಚಾಯಿತಿ ಪಿ.ಡಿ.ಓ.ಗಳು ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಸ್ವ ಸಹಾಯ ಸಂಘಗಳ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮವಹಿಸುವಂತೆ ಸೂಚಿಸಿದರು.
ತಾಲ್ಲೂಕು ಮಟ್ಟದಲ್ಲಿ ಆಯಾ ವಿಧಾನ ಸಭಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ತಹಸೀಲ್ದಾರ್ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಗಳು ಎಲ್ಲಾ ಅಧಿಕಾರಿಗಳ ಮತ್ತು ಸಂಘ ಸಂಸ್ಥೆಗಳೊAದಿಗೆ ಸಭೆ ನಡೆಸುವಂತೆ ಸೂಚಿಸಿದರು.
ಸಂವಿಧಾನ ಮಾನವ ಸರಪಳಿ ಬಗ್ಗೆ  ಎಲ್ಲಾ ಪತ್ರಿಕಾ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪ್ರಚಾರ ನೀಡುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ವ್ಯಾಪಕ ಪ್ರಚಾರ ನೀಡುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಮಾತನಾಡಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರ ದೊರೆಯಲಿದೆ.  ಸೆ.10 ರಂದು ವೆಬ್‌ಸೈಟ್  ಲಿಂಕ್ ಬಿಡುಗಡೆ ಮಾಡಲಾಗುವುದು ಅದರಲ್ಲಿ ಸೆ.26 ವರೆಗೆ ಮಾನವ ಸರಪಳಿ ಛಾಯಚಿತ್ರ ಅಪ್ಲೋಡ್ ಮಾಡಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Post a Comment

Previous Post Next Post