ಹಾಸನ: ಹಾಸನ ತಾಲೂಕಿನ ನಾಗತವಳ್ಳಿ ಗ್ರಾಮದ ಸರ್ವೆ ನಂಬರ್ 54ರಲ್ಲಿ ಪಾರ್ಕ್‌ಗೆ ಮೀಸಲಿಟ್ಟಿದ್ದ ಜಾಗವನ್ನು ಪಾರ್ಕ್ ಆಗಿಯೇ ಉಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಎಚ್ಚರಿಸಿದ್ದಾರೆ.
ಈ ಹಿಂದೆ ಗ್ರಾಮದ ಜನರ ಅನುಕೂಲಕ್ಕೆ ನಾಗತವಳ್ಳಿ ಗ್ರಾಮದ ಸರ್ವೆ ನಂಬರ್ 54ರಲ್ಲಿ ಎರಡು ಎಕರೆ ಜಾಗವನ್ನು ಮೀಸಲಿಡಲಾಗಿತ್ತು. ಆದರೆ KAIDB ಅಧಿಕಾರಿಗಳು ಖಾಸಗಿ ಪುಷ್ಪಗಿರಿ ವೇರ್ ಹೌಸ್ ಮಾಲೀಕನಿಗೆ ಅಕ್ರಮವಾಗಿ ಮಂಜೂರು ಮಾಡಿಕೊಟ್ಟಿದ್ದಾರೆ ಎಂದು ದೂರಿದರು.
K.A.I.D.B ಅಧಿಕಾರಿಗಳು ಖಾಸಗಿಯವರ ಜೊತೆಃ ಶಾಮೀಲಾಗಿ ಜಾಗವನ್ನು ಪುಷ್ಪಗಿರಿ ವೇರ್ ಹೌಸ್ ಮಾಲೀಕರಿಗೆ ಅಕ್ರಮವಾಗಿ ಮಂಜೂರು ಮಾಡಿಕೊಟ್ಟಿದ್ದಾರೆ. ಇದರ ವಿರುದ್ಧ ಗ್ರಾಮಸ್ಥರು ನ್ಯಾಯಾಲಯದ ಮೆಟ್ಟಿಲೇರಿದ ಪರಿಣಾಮ ಕೋರ್ಟ್ ಇದೀಗ ತಡೆಯಾಜಾಜ್ಞೆ ನೀಡಿದೆ. ಆದಾಗ್ಯೂ ಖಾಗಿಯವರು ಸ್ಥಳದಲ್ಲಿ ಕೆಲಸ ಮುಂದುವರೆಸಿದ್ದಾರೆ. ಕೈಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಖಾಸಗಿಯವರಿಗೆ ಪೂರಕವಾಗಿ ಸಹಕಾರ ನೀಡುತ್ತಿದೆ ಎಂದರು.
ಹಾಲಿ ಸಂಸದರ ಕೈವಾಡದಿಂದ 200ರಲ್ಲಿ ಪಾರ್ಕ್ ಆಗಿದ್ದ ಜಾಗದಲ್ಲಿ 2013ರ ಅದಕ್ಕೆ ಬೋಗಸ್ ದಾಖಲೆ ಸಲ್ಲಿಸಿ ಅದನ್ನು ಖಾಸಗಿಯವರಿಗೆ ಮಂಜೂರು ಮಾಡಿಕೊಟ್ಟಿದ್ದಾರೆ. ಕೂಡಲೇ ಕೆಲಸ ನಿಲ್ಲಿಸಬೇಕು. ಗ್ರಾಮದ 2 ಎಕರೆ ಜಾಗ ಗ್ರಾಮಸ್ಥರ ಅನುಕೂಲಕ್ಕೆ ಮೀಸಲಾಗಿ ಇಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.