ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ

 ಬೇಲೂರು : ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಜೆ.ಸುರಪುರ ಗ್ರಾಮದ ಕೇಶವಮೂರ್ತಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ತಿಂಗಳ ಹಿಂದೆ ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಆರ್‌ಎಂಸಿಯಲ್ಲಿ ಶುಂಠಿ ವಾಷಿಂಗ್ ಕೆಲಸ ಮಾಡಿಕೊಂಡಿದ್ದರು.



ಸೆ.30 ರಂದು ಆರ್‌ಎಂಸಿಗೆ ಕೆಲಸಕ್ಕೆ ತೆರಳಲು ವಾಹನ ಕಾಯುತ್ತಿದ್ದ ಮಹಿಳೆಗೆ ಡ್ರಾಪ್ ನೀಡುವುದಾಗಿ ಪಲ್ಸರ್ ಬೈಕ್ ಗೆ ಹತ್ತಿಸಿಕೊಂಡ ಆರೋಪಿ ಆಕೆಯನ್ನು ಜೋಳದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ. ಈ ಸಂಬಂಧ ಸಂತ್ರಸ್ತ ಮಹಿಳೆ ಬೇಲೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

Previous Post Next Post