ಕಾಫಿ ತೋಟಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆಗಳು ದಾಳಿ

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಫಿ ತೋಟಕ್ಕೆ ತೆರಳುತ್ತಿದ್ದ ನಾಗೇಶ್ ಎಂಬ ರೈತನ ಮೇಲೆ ಕಾಡಾನೆಗಳು ದಾಳಿ ನಡೆಸಿದೆ.
ನಾಗೇಶ್, ಬೈಕ್‌ನಲ್ಲಿ ಕಾಫಿ ತೋಟಕ್ಕೆ ತೆರಳುತ್ತಿದ್ದಾಗ ಆರು ಕಾಡಾನೆಗಳು ಏಕಾಏಕಿ ದಾಳಿ ನಡೆಸಿದವು. ಕಾಡಾನೆಗಳ ದಾಳಿಯಿಂದ ನಾಗೇಶ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ನಾಗೇಶ್‌ಗೆ ಬೇಲೂರು ತಾಲ್ಲೂಕಿನ ಜಿಲ್ಲಾ ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಲ್ಲಿ, ಕಾಫಿ ತೋಟದಲ್ಲಿ ಈಗಿರುವ 30ಕ್ಕೂ ಹೆಚ್ಚು ಕಾಡಾನೆಗಳು ಇದ್ದು. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಆದರೆ, ಬೇಲೂರು ಭಾಗದಲ್ಲಿ ಇದು ಏಕೆ ಹೆಚ್ಚುತ್ತಿರುವುದಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಾಪಡಿದ್ದಾರೆ.

Post a Comment

Previous Post Next Post