ಚನ್ನರಾಯಪಟ್ಟಣದ ಪ್ರತಿಷ್ಠಿತ ಶಾಲೆಯಾದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯನ್ನು ತುಂಬಾ ಸಡಗರದಿಂದ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ದಿನೇಶ್ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಸತ್ವಜೆಗಳಾಗಿ ಈ ಸಮಾಜಕ್ಕೆ ಮಾದರಿಯಾಗುವಂತೆ ಶಿಕ್ಷಣವನ್ನು ಪಡೆದು ಪೋಷಕರಿಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.
ಪ್ರಾನ್ಸಿಪಾಲರಾದ ವಿಶ್ವನಾಥ್ ಮಾತನಾಡಿ ಪ್ರಪಂಚದ ವಿವಿಧ ದೇಶಗಳಲ್ಲಿ ನಾಸಾ, ವೈದ್ಯಕೀಯ,ಇಂಜಿನಿಯರ್, ರಾಜಕೀಯ, ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಕನ್ನಡಿಗರು ಹೆಚ್ಚಿನ ರೀತಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಕನ್ನಡ ನಾಡಿಗೆ ಹೆಸರು ಬರುವಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಶಾಲೆಯ ವಿದ್ಯಾರ್ಥಿಗಳು ನೃತ್ಯ ಮಾಡಿದರು ಹಾಗೂ ಶಾಲೆಯ ಶಿಕ್ಷಕರು ಸಹ ಹಲವಾರು ರೀತಿಯ ನೃತ್ಯಗಳನ್ನು ಮಾಡುವ ಮೂಲಕ ಮಕ್ಕಳನ್ನು ರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಿನೇಶ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಗೀತಾ ದಿನೇಶ್, ಪ್ರಾಂಶುಪಾಲರಾದ ವಿಶ್ವನಾಥ್ ಕೋಳಿವಾಡ, ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
Tags
ಚನ್ನರಾಯಪಟ್ಟಣ