ಡಿ.11 ರಂದು ಸಾರ್ವಜನಿರಿಂದ ಅಹವಾಲು ಸ್ವೀಕಾರ ಸಭೆ

ಹಾಸನ.ಡಿ.09:- ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗ ವತಿಯಿಂದ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗಧಿತ ಸಮಯಕ್ಕೆ ಸರಿಯಾಗಿ ಸ್ಪಂದಿಸದೆ ಇರುವ ಬಗ್ಗೆ ಸರ್ಕಾರಿ ಅಧಿಕಾರಿಗಳ ವಿರುದ್ಧ ಬರುತ್ತಿರುವ ದೂರುಗಳ ಹಿನ್ನೆಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳ ನಿರ್ವಹಣೆಯ ಉದ್ದೇಶವನ್ನು ಸಾಕಾಗೊಳಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರಿ ಕಚೇರಿಯ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಸಾರ್ವಜನಿರಿಂದ ಅಹವಾಲು ಸ್ವೀಕಾರ ಸಭೆಯನ್ನು ಡಿ.11 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೂ ಅರಸೀಕೆರೆ ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

 ಸಾರ್ವಜನಿಕರ ಅಹವಾಲು ಸಭೆಗೆ ನಿಗಧಿತ ದಿನಾಂಕ ಮತ್ತು ಸಮಯದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಬಗ್ಗೆ ಅಹವಾಲು ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

Post a Comment

Previous Post Next Post