ಹಾಸನ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬರುವ ಆಲೂರು ತಾಲ್ಲೂಕಿನ ಚೌಳಗೆರೆ ಬಳಿ ಟೋಲ್ ಶುಲ್ಕ ವಸೂಲಿ ಮಾಡದಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ರಾಟ್ರೀಯ ಹೆದ್ದಾರಿಯ ಯೋಜನಾಧಿಕಾರಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿAದು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ರಸ್ತೆ ಕಾಮಗಾರಿ ಒಪ್ಪಂದದ ಪತ್ರ ಪರಿಶೀಲಿಸಿ ನಿರ್ಧಾರ ನೀಡಲಾಗುವುದು ಅಲ್ಲಿಯವರೆಗೆ ಯಾವುದೇ ಶುಲ್ಕ ವಸೂಲಿ ಮಾಡದಂತೆ ತಿಳಿಸಿದರು. ನಿಗದಿತ ಅವಧಿಯಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳದೆ ಜನರಿಗೆ ತೊಂದರೆ ಆಗುತ್ತಿದೆ ಎಂದು ಜಿಲ್ಲಾಧಿಕಾರಿ ಅವರು ಶಾಂತಿಗ್ರಾಮದಿAದ ಮಾರೆನಹಳ್ಳಿಯ ವರೆಗೆ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸುವಂತೆ ಸೂಚಿಸಿದರು.
ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಉಪ ವಿಭಾಗಾಧಿಕಾರಿ ಶೃತಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Tags
ಹಾಸನ