ರೋಟರಿ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಸಕಲೇಶಪುರ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗು ಕಲೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ರೋಟರಿ ಆಂಗ್ಲ ಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಹಾಸನದ ವಾಸವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ. 16 ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆದಿತ್ತು.

ಪ್ರೌಢ ಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೆ.ಎಸï‍. ಹಾರ್ದಿಕ್ ಹಾಗು ಎಂ. ಅಮೋಘವರ್ಷ ಪ್ರಥಮ ಸ್ಥಾನ ಪಡೆದಿದ್ದಾರೆ. ಹಿರಿಯ ಪ್ರಾಥಮಿಕ ಹಂತದ ಚಿತ್ರಕಲಾ ಸ್ಪರ್ಧೆಯಲ್ಲಿ ಹೆಚ್.ಜಿ.ಯುವಿಕಾ ಪ್ರಥಮ ಸ್ಥಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ

Post a Comment

Previous Post Next Post