ಚಾಲಕನ ನಿಯಂತ್ರಣ ತಪ್ಪಿದ ಎರ್ಟಿಗಾ ಕಾರು ಡಿವೈಡರ್ ಕಂಬಕ್ಕೆ ಡಿಕ್ಕಿ

 ಹಾಸನ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾಗೂ ವಿದ್ಯುತ್ ದೀಪದ ಕಂಬಕ್ಕೆ ಎರ್ಟಿಗಾ ಕಾರು ಡಿಕ್ಕಿ ಹೊಡೆದಿರುವ ಘಟನೆ ನಗರದ ಬಿ.ಎಂ ರಸ್ತೆಯ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು ಬೆಂಗಳೂರಿನಿಂದ ಕಡೆಯಿಂದ ಬರುತ್ತಿದ್ದ ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಇದ್ದ ಡಿವೈಡರ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Post a Comment

Previous Post Next Post