ಹೆದ್ದಾರಿ ಕಾರ್ಯಗತಿ: ಕೇಂದ್ರ ಸಚಿವರಿಗೆ ಸಂಸದರ ಮನವಿ

ಹಾಸನ: ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ, ಅಭಿವೃದ್ಧಿ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿ, ಭಾರತ ಮಾಲಾ ಯೋಜನೆಯಡಿ ರಸ್ತೆ ಅಭಿವೃದ್ಧಿ ಅನುಮೋದನೆಗಾಗಿ ಮನವಿ ಸಲ್ಲಿಸಿದರು.

ಹಾಸನ-ರಾಯಚೂರು ಎಕನಾಮಿಕ್ ಕಾರಿಡಾರಿನ ಭಾಗವಾದ ಹಾಸನ-ಹಿರಿಯೂರು ಎಕನಾಮಿಕ್ ಕಾರಿಡಾರ್ ಅಭಿವೃದ್ಧಿಯ ಕುರಿತು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.

ಈ ಉದ್ದೇಶಿತ ಹೆದ್ದಾರಿ, ಹಾಸನ-ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳನ್ನು ಸಂಪರ್ಕಿಸಲಿದೆ. ಇದು ಸರಕು ಸಾಗಾಣಿಕೆ ಮತ್ತು ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಥವಾಗಿಸಲಿದೆ. 

ಪ್ರಸ್ತುತ ಡಿಪಿಆರ್ ಹಂತದಲ್ಲಿರುವ ಹಾಸನ-ಹಿರಿಯೂರು ಹೆದ್ದಾರಿ ಯೋಜನೆಯನ್ನು ಕ್ಷಿಪ್ರವಾಗಿ ಪೂರ್ಣಗೊಳಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕಾಮಗಾರಿ ಶೀಘ್ರವೇ ವೇಗ ಪಡೆಯುವ ನಿರೀಕ್ಷೆಗಳಿವೆ ಎಂದು ಸಂಸದರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




Post a Comment

Previous Post Next Post