ಹಾಸನ ಡಿ.9: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024-25ನೇ ಸಾಲಿನ 2023ನೇ ಕ್ಯಾಲೆಂಡರ್ ವರ್ಷದಲ್ಲಿ 1.1.2023 ರಿಂದ 31.12.2023 ಅಂತರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಡಿ.23 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು, ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು, ಪ್ರೋತ್ಸಾಹಧನವನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರ ನೀಡುವುದು, ಅಂತರಾಷ್ಟಿçÃಯ/ರಾಷ್ಟಿçÃಯ /ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದAತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು.
ಕ್ರೀಡಾಪಟುಗಳು ಕರ್ನಾಟಕ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ, ಸರ್ಕಾರಿ/ಆರೆ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವವರು ಅಂತರಾಷ್ಟಿçÃಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಾಗೂ ಪದಕ ಪಡೆದವರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಿರುತ್ತಾರೆ, ಕ್ರೀಡಾಪಟುಗಳ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಆರ್.ಡಿ. ಸಂಖ್ಯೆಯನ್ನು ಒಳಗೊಂಡ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು.
ಒಲಂಪಿಕ್/ಏಷ್ಯನ್/ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಅಂತರಾಷ್ಟಿçÃಯ ಸಂಸ್ಥೆ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿAದ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್‌ಗಳಿಗೆ ಮಾತ್ರ ಪ್ರೋತ್ಸಾಹಧನ ನೀಡಲಾಗುವುದು, 6ನೇ ತರಗತಿಯಿಂದ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಂತರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯ ಹಿರಿಯರ (ವಯೋಮಿತಿ ಗುಂಪು) ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ, ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟವನ್ನು ಲಗತ್ತಿಸಬೇಕು (ಹೆಸರು, ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ. ಸಂಖ್ಯೆ ಇರುವ ಸಂಪೂರ್ಣ ವಿವರಗಳನ್ನೊಳಗೊಂಡ ಪ್ರತಿ)
ಹಿಂದಿನ ಕ್ಯಾಲೆಂಡರ್ ವರ್ಷದ ಕ್ರೀಡಾ ಸಾಧನೆಯನ್ನು ಮಾತ್ರ ಪರಿಗಣಿಸಿ ಪ್ರಸ್ತಕ ಸಾಲಿನ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು, ಒಂದು ವರ್ಷದಲ್ಲಿ ಒಂದಕ್ಕಿAತ ಹೆಚ್ಚಿನ ಯಾವುದೇ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದರೂ ಕೂಡ ಒಂದು ಅತ್ಯುನ್ನತ ಸಾಧನೆ/ಪದಕವನ್ನು ಮಾತ್ರ ಪರಿಗಣಿಸಿ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
