ಹಾಸನ: ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ೧೯೨೪ ಡಿ.೨೬ ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಐತಿಹಾಸಿಕ ಅಧಿವೇಶನಕ್ಕೆ ೧೦೦ ವರ್ಷ ತುಂಬಿದ ಹಿನ್ನೆಲೆ ಬರುವ ಡಿ.೨೬ ರಂದು ೨೭ ರಂದು ಬೆಳಗಾವಿಯಲ್ಲಿ ಬೃಹತ್ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಹೀದ್ ತಿಳಿಸಿದರು.
ಇಂದು ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರೀಯ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೊದಲಾದವರ ಉಪಸ್ಥಿತಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದರು.
ರಾಜ್ಯ, ದೇಶದ ಜನರಿಗೆ ಕಾಂಗ್ರೆಸ್ ಇತಿಹಾಸ, ಕೊಡುಗೆಯನ್ನು ತಿಳಿಸುವ ಕೆಲಸ ಮಾಡಲಾಗುವುದು. ಡಿ.೨೬ ರಂದು ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ೨೭ ರಂದು ಶತಮಾನೋತ್ಸವ ನಡೆಯಲಿದೆ. ಎಲ್ಲಾ ನಾಯಕರು ಬೆಳಗಾವಿಗೆ ಆಗಮಿಸಲಿದ್ದಾರೆ. ಹಾಸನ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಲಿದ್ದಾರೆ. ಇಂದು ಗಾಂಧಿ ತತ್ವಕ್ಕೆ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಪಚಾರ,ಅವಮಾನ ಮಾಡುವ ಕೆಲಸ ಆಗುತ್ತಿದ್ದು, ಇದು ನಿಲ್ಲಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ವಿಶ್ವನಾಥ್, ಗೋಪಾಲ, ಕುಮಾರ, ಕರೀಗೌಡ, ರಾಮಚಂದ್ರ, ಗುರುಸ್ವಾಮಿ ಇದ್ದರು.