ಅರಸೀಕೆರೆ ಗ್ರಾಮಾಂತರ: ವಾಹನ ಚಾಲನೆ ಮಾಡುವಾಗ ಪ್ರತಿಯೊಬ್ಬ ವ್ಯಕ್ತಿಯು ಹೆಲ್ಮೆಟ್ ಕಡ್ಡಾಯ ಧರಿಸಬೇಕು ಹಾಗೂ ಪರವಾನಗಿಯನ್ನು ಇಟ್ಟುಕೊಳ್ಳಬೇಕು ಎಂದು ಬಾಣಾವರ ಪಿಎಸ್‌ಐ ಸುರೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಣಕಟ್ಟೆಯ ಶ್ರೀ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜು ಹಾಗೂ ಬಾಣಾವರ ಪೊಲೀಸ್ ಠಾಣೆ ವತಿಯಿಂದ ಇತ್ತೀಚೆಗೆ ಆಯೋಜಿಸಿದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ನಾಗೇಶ್‌ರಾವ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಕಾನೂನಿನ ಅರಿವು ಅಗತ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಿಪಿಐ ಅರುಣ್‌ಕುಮಾರ್ ಮಾತನಾಡಿ, ಬಾಲ್ಯವಿವಾಹದ ಬಗ್ಗೆ ಇತ್ತೀಚಿನ ಯುವ ಪೀಳಿಗೆಯಲ್ಲಿ ಅರಿವು ಅಗತ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಶಶಿಕುಮಾರ್, ಕೆ.ಎಸ್.ಮೂರ್ತಿ, ಮಹೇಶ್ ಅಶೋಕ್ ಇತರರು ಉಪಸ್ಥಿತರಿದ್ದರು
Tags
ಅರಸೀಕೆರೆ