ಹಾಸನ :- ನಗರದ ಎಂ ಕೃಷ್ಣ ನಗರದಲ್ಲಿ ನಿರ್ಮಾಣವಾಗಲಿರುವ ನೂತನ ಪುಷ್ಪಗಿರಿ ಕ್ಯಾನ್ಸರ್ ಹಾಗೂ ಜನರಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಇಂದು ಭೂಮಿ ಪೂಜೆ ನೆರವೇರಿಸಲಾಗಿದೆ.
ಪುಷ್ಪಗಿರಿ ಮಹಾಸಂಸ್ಥಾನ ಮಠದ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಪುಷ್ಪಗಿರಿ ಕ್ಯಾನ್ಸರ್ ಆಸ್ಪತ್ರೆ ಹಾಗೂ ಜನರಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ವಿಜಯೇಂದ್ರ, ಬೇಲೂರು ಕ್ಷೇತ್ರದ ಶಾಸಕರಾದ ಎಚ್ ಕೆ ಸುರೇಶ್, ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು,ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳು, ಪುಷ್ಪಗಿರಿ ಮಠದ ಪರಮಪೂಜ್ಯ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ವಿವಿಧ ಮಠಗಳ ಪೂಜ್ಯ ಸ್ವಾಮಿಜಿಗಳು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ , ಬಿಜೆಪಿ ಹಾಸನ ಜಿಲ್ಲಾಧ್ಯಕ್ಷರಾದ ಸಿದ್ದೇಶ್ ನಾಗೇಂದ್ರ , ಇನ್ನಿತರ ಮುಖಂಡರು, ಕಾರ್ಯಕರ್ತರು ಹಾಗೂ ಶ್ರೀ ಮಠದ ಭಕ್ತಾದಿಗಳು ಉಪಸ್ಥಿತರಿದ್ದರು.
Tags
ಹಾಸನ
